top of page

ಜನರ ಸುರಕ್ಷತೆಗಾಗಿ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ === ಸಚಿವ ಶಿವರಾಮ ಹೆಬ್ಬಾರ್.


ree

23-7-2021. ಶುಕ್ರವಾರ.

ಯಲ್ಲಾಪುರ.

ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವಳಿ, ಕಾಳಿ, ಅಘನಾಶಿನಿ ಹಾಗೂ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಶಿರಸಿಯ ಬಾಶಿ ಪಂಚಾಯತದ ಮುಗಳ್ಳಿ ಪ್ರದೇಶ ಮುಳುಗಡೆಯಾಗಿ ಅತ್ಯಂತ ಹೆಚ್ಚು ಹಾನಿಯಾಗಿದೆ ಕಾರವಾರ ತಾಲೂಕಿನಲ್ಲಿ ಕದ್ರಾ ಮತ್ತು ಕೊಡಸಳ್ಳಿ ಡ್ಯಾಮನಿಂದ 2.5 ಲಕ್ಷ ಕ್ಕೂ ಹೆಚ್ಚು ಕ್ಯುಸೇಕ್ಸ್ ನೀರು ಹೊರಬಿಟ್ಟಿರುವ ಕಾರಣಕ್ಕೆ, ಕಾರವಾರ ತಾಲ್ಲೂಕಿನ ಐದಕ್ಕೂ ಹೆಚ್ಚು ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ree

ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಗಂಗಾವಳಿ ನದಿಯಲ್ಲಿ ನೀರು ಉಕ್ಕೇರಿದ ಪರಿಣಾಮ ಅಂಕೋಲಾ ತಾಲೂಕಿನ ಶೇವಕಾರ, ಕೈಗಡಿ, ಹೆಗ್ಗಾರ್, ಕಲ್ಲೇಶ್ವರ, ಮುಂತಾದ ಪ್ರದೇಶಗಳಿಗೆ ನೀರು ನುಗ್ಗಿ ಅನೇಕ ಅನಾಹುತಗಳು ಸಂಭವಿಸಿವೆ. ಆದರೆ ಯಾವುದೇ ಜೀವಹಾನಿ ಆಗಿಲ್ಲ. ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮ ಸಂಪೂರ್ಣ ಜಲಾವೃತವಾಗಿದೆ. ಅಲ್ಲಿಯ 20 ಜನರಿಗೆ ಸ್ಥಳೀಯ ಪ್ರೌಢಶಾಲೆಯಲ್ಲಿ ಆಶ್ರಯ ನೀಡಲಾಗಿದೆ.ಪ್ರವಾಹದ ಸ್ಥಿತಿಯಿಂದ ಸಾರ್ವಜನಿಕರಿಗಾದ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ, ಪೊಲೀಸ್ ಅಧಿಕ್ಷಕರು, ಸಿಇಓ, ಕುಮಟಾ, ಭಟ್ಕಳ, ಶಿರಸಿ, ಕಾರವಾರ ಸಹಾಯಕ ಆಯುಕ್ತರ ತಂಡ ಜಿಲ್ಲೆಯ ಸುರಕ್ಷತೆ ದೃಷ್ಟಿಯಿಂದ ಎಲ್ಲ ಕ್ರಮಗಳನ್ನು ತೆಗೆದುಕೊಂಡು ಸ್ಥಿತಿಯನ್ನು ನಿಭಾಯಿಸಲು ಎನ್.ಡಿ.ಆರ್.ಎಫ್ ತಂಡದ ಜೊತೆಗೆ ಕೂಡಿ ಕೆಲಸ ಮಾಡುತ್ತಿದೆ ಜನರ ಸುರಕ್ಷತೆಗೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ.ಜನರು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನದಿಯ ಹತ್ತಿರ ಯಾರು ಸಹ ಬರಬಾರದು ಎಂದು ವಿನಂತಿಸಿಕೊಳ್ಳುತ್ತೆನೆ ನಿಮ್ಮ ಸುರಕ್ಷತೆಗಾಗಿ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದಿದ್ದಾರೆ.

---- ADVT---

ree
ree

---------------------------------------------------------------------------------------------

ನಮ್ಮ E YELLAPUR -FACE BOOK PAGE LIKE ಮಾಡಿ - https://www.facebook.com/eyellapur ------------------------------------------------------------------------------------------------




 
 
 

Comments


bottom of page